ವಿಪತ್ತು ನಿರ್ವಹಣೆ, ಸಮಾಜಮುಖಿ ಚಟುವಟಿಕೆಗಳಿಂದ ಜಾಗೃತಿ

 ಶೌರ್ಯ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆಯನ್ನು ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಉದ್ಘಾಟಿಸಿದರು. ಜಯವಂತ ಪಟಗಾರ, ನಿತೇಶ್ ಕೆ., ಪ್ರಕಾಶ್ ಇತರರು ಉಪಸ್ಥಿತರಿದ್ದರು.
ಶೌರ್ಯ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆಯನ್ನು ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಉದ್ಘಾಟಿಸಿದರು. ಜಯವಂತ ಪಟಗಾರ, ನಿತೇಶ್ ಕೆ., ಪ್ರಕಾಶ್ ಇತರರು ಉಪಸ್ಥಿತರಿದ್ದರು.
Published on
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಡೆಯುತ್ತಿರುವ ಶೌರ್ಯ ಕಾರ್ಯಕ್ರಮವು ಕಡಬ ತಾಲೂಕಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದೆ. ವಿಪತ್ತು ನಿರ್ವಹಣೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಶೌರ್ಯ ಘಟಕ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಎ.ಬಾಬು ಹೇಳಿದರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ಆಶ್ರಯದಲ್ಲಿ ಕಡಬದ ಶ್ರೀ ಜಯದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕ ಕೋರ್ ಕಮಿಟಿ ಸಭೆ ಉದ್ಘಾಟಿಸಿ ಮಾತನಾಡಿದರು.
ಶೌರ್ಯ ಕಾರ್ಯಕ್ರಮದ ಯೋಜನಾಧಿಕಾರಿ ಜಯವಂತ ಪಟಗಾರ ಶೌರ್ಯ ಕಾರ್ಯಕ್ರಮದ ಆಶಯ ಹಾಗೂ ಉದ್ದೇಶಗಳನ್ನು ವಿವರಿಸಿದರು. ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ನಿತೇಶ್ ಕೆ., ಕಡಬ ತಾಲೂಕಿನ ವಿವಿಧ ಮೇಲ್ವಿಚಾರಕರು, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು, ಘಟಕ ಪ್ರತಿನಿಧಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಸೋಮೇಶ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net