ಮಕ್ಕಳ ಭವಿಷ್ಯಕ್ಕೆ ದುರಭ್ಯಾಸ ಮಾರಕ

 ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮವನ್ನು ಹೆಬ್ರಿ ಎಎಸ್‌ಐ ಬಾಲಕೃಷ್ಣ ಉದ್ಘಾಟಿಸಿದರು. ಪ್ರಮುಖರಾದ ಎಚ್.ಜನಾರ್ದನ್, ಉದಯ ಕುಮಾರ, ಪ್ರಸಾದ ಭಂಡಾರಿ, ಲಕ್ಷ್ಮೀ ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮವನ್ನು ಹೆಬ್ರಿ ಎಎಸ್‌ಐ ಬಾಲಕೃಷ್ಣ ಉದ್ಘಾಟಿಸಿದರು. ಪ್ರಮುಖರಾದ ಎಚ್.ಜನಾರ್ದನ್, ಉದಯ ಕುಮಾರ, ಪ್ರಸಾದ ಭಂಡಾರಿ, ಲಕ್ಷ್ಮೀ ಉಪಸ್ಥಿತರಿದ್ದರು.
Published on
ಹೆಬ್ರಿ: ಮಾದಕ ವಸ್ತುಗಳ ದುರುಪಯೋಗ ಇಂದಿನ ಯುವ ಪೀಳಿಗೆ ಮತ್ತು ಮಕ್ಕಳ ಭವಿಷ್ಯಕ್ಕೆ ಅತ್ಯಂತ ಮಾರಕವಾಗಿದೆ. ವಿದ್ಯಾರ್ಥಿ ದೆಸೆಯಲ್ಲೇ ಇಂತಹ ದುರಭ್ಯಾಸಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೆಬ್ರಿ ಎಎಸ್‌ಐ ಬಾಲಕೃಷ್ಣ ಹೇಳಿದರು.
ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹೆಬ್ರಿ ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಸದಸ್ಯ ಎಚ್.ಜನಾರ್ದನ್, ಯೋಜನೆಯ ಮೇಲ್ವಿಚಾರಕ ಉದಯ ಕುಮಾರ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರಸಾದ ಭಂಡಾರಿ, ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಲಕ್ಷ್ಮೀ ಉಪಸ್ಥಿತರಿದ್ದರು. ಶಿಕ್ಷಕ ವೆಂಕಟರಮಣ ಕಲ್ಕೂರ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net