ಏ. 15ರಿಂದ ಬನ್ನಂಜೆಯಲ್ಲಿ ವೈಭವದ ಬ್ರಹ್ಮಕಲಶೋತ್ಸವ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುದ್ದಿಗೋಷ್ಠಿ.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುದ್ದಿಗೋಷ್ಠಿ.
Published on
ಉಡುಪಿ: ಮೂಡನಿಡಂಬೂರು ಗ್ರಾಮದ ಐತಿಹಾಸಿಕ ಪ್ರಸಿದ್ಧ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್​ 15ರಿಂದ 20ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಭೂದಾನ ಸೇವೆ ವೈಭವದಿಂದ ಜರುಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಮಾಧವ ಪೂಜಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏಪ್ರಿಲ್​ 15ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಜೋಡುಕಟ್ಟೆಯಿಂದ ಬೃಹತ್​ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ನಾಡೋಜ ಡಾ. ಜಿ. ಶಂಕರ್​ ಚಾಲನೆ ನೀಡಲಿದ್ದಾರೆ. ಶಾಸಕ ಯಶ್​ಪಾಲ್​ ಸುವರ್ಣ, ವಿಧಾನ ಪರಿಷತ್​ ಸದಸ್ಯೆ ಡಾ. ಆರತಿಕೃಷ್ಣ, ಉದ್ಯಮಿ ಪ್ರಸಾದ್​ ರಾಜ್​ ಕಾಂಚನ್​ ಉಪಸ್ಥಿತರಿರಲಿದ್ದಾರೆ ಎಂದರು.

ಏ. 16ರಂದು ಬೆಳಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಮಧ್ಯಾಹ್ನ ಅನ್ನಸಂತರ್ಪಣೆ, ಸಾಯಂಕಾಲ 5ಕ್ಕೆ ಪ್ರಾಸಾದ ಶುದ್ಧಿ, ವಾಸ್ತುಹೋಮ, ಪ್ರಾಕಾರ ಬಲಿ ನಡೆಯಲಿದೆ. ಸಾಯಂಕಾಲ 6.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಲಿದ್ದು, ಕಾಣಿಯೂರು ಮಠದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅತಿಥಿಗಳಾಗಿ ವಿಧಾನಸಭೆ ಸಭಾಪತಿ ಯು.ಟಿ. ಖಾದರ್​, ಮಾಜಿ ಸಚಿವರಾದ ವಿನಯ್​ ಕುಮಾರ್​ ಸೊರಕೆ, ಕೆ. ಜಯಪ್ರಕಾಶ್​ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದರು.
ಏಪ್ರಿಲ್​ 17ರಂದು 6.30ಕ್ಕೆ ಸಭಾ ಕಾರ್ಯಕ್ರಮವನ್ನು ಮಾಹೆ ಸಹ ಕುಲಾಧಿಪತಿ ಡಾ. ಎಚ್​.ಎಸ್​. ಬಲ್ಲಾಳ್​ ಉದ್ಘಾಟಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ಮಾಜಿ ಶಾಸಕ ರಘುಪತಿ ಭಟ್​ ಭಾಗವಹಿಸಲಿದ್ದಾರೆ. 18ರಂದು ಧಾರ್ಮಿಕ ಸಭೆಯಲ್ಲಿ ಎಂ.ಎನ್​. ರಾಜೇಂದ್ರ ಕುಮಾರ್​, ವಿಧಾನ ಪರಿಷತ್​ ಸದಸ್ಯ ಐವನ್​ ಡಿಸೋಜ, ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಶಿರೂರು ಮಠದ ದಿವಾನರಾದ ಡಾ. ಉದಯಕುಮಾರ್​ ಸರಳತ್ತಾಯ ಪಾಲ್ಗೊಳ್ಳಲಿದ್ದಾರೆ. 19ರಂದು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್​ಕರ್​ ಉದ್ಘಾಟಿಸಲಿದ್ದು, ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಎಸ್ಪಿ ಹರಿರಾಮ್​ ಶಂಕರ್​, ಹಿರಿಯ ಪೊಲೀಸ್​ ಅಧಿಕಾರಿ ದಯಾ ನಾಯಕ್​ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಭೂದಾನ ಅಭಿಯಾನ
ಪಾರ್ಕಿಂಗ್​ ಅಗತ್ಯತೆಗಳಿಗಾಗಿ ದೇವಸ್ಥಾನದ ಸಮೀಪದ 36 ಸೆಂಟ್ಸ್​ ಜಾಗವನ್ನು 1.55 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಭೂದಾನ ಯೋಜನೆ ಪ್ರಾರಂಭಿಸಲಾಗಿದ್ದು, ಈಗಾಗಲೇ ಸಂಬಂಧಪಟ್ಟ ಮಾಲೀಕರಿಗೆ 50 ಲಕ್ಷ ರೂ. ಮುಂಗಡ ನೀಡಲಾಗಿದೆ. ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಂಪೂರ್ಣ ಮೊತ್ತ ನೀಡಲು ಉದ್ದೇಶಲಾಗಿದೆ. ಇದಕ್ಕಾಗಿ ಚದರಡಿ ಒಂದಕ್ಕೆ 2000 ರೂ. ಅಥವಾ 1000 ದಿಂದ 5000 ರೂ.ವರೆಗೆ ಕೂಪನ್​ ಮೂಲಕ ಕಾಣಿಕ ಸಂಗ್ರಹಿಸಲಾಗುವುದು ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್​ ಕಾಂಚನ್​, ಪ್ರಧಾನ ತಂತ್ರಿ ಪಿ. ಶಶಿಕಾಂತ ತಂತ್ರಿ, ಪ್ರಧಾನ ಅರ್ಚಕ ವಾಸುದೇವ ಉಪಾಧ್ಯ, ರವಿರಾಜ್​ ಭಟ್​, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್​ ಪುತ್ರನ್​, ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ಯು.ಸುದೇಶ್​ ಶೇಟ್​, ರಾಜೇಶ್​ ಬಿ. ವಿದ್ಯಾಲತಾ ಶೆಟ್ಟಿ, ಶಮಿತಾ ಭಂಡಾರಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net