ಗೂಡಿನಬಳಿ ನಿವಾಸಿ ಅಶ್ರಫ್ ಅವರಿಗೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಈ ಸಂದರ್ಭ ಗಸ್ತು ತಿರುಗುತ್ತಿದ್ದ ಬಂಟ್ವಾಳ ನಗರ ಠಾಣೆ ಕಾನ್‌ಸ್ಟೆಬಲ್ ವಿನೋದ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಸ್ಥಳಕ್ಕೆ ಧಾವಿಸಿದ್ದಾರೆ. ಅವರಿಗೆ ಲಘು ಹೃದಯಾಘಾತ ಸಂಭವಿಸಿರುವುದು ಗಮನಕ್ಕೆ ಬಂದಿದ್ದು, ಸಿಪಿಆರ್ ನೀಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸಿಬ್ಬಂದಿಯ ಸಮಯಪ್ರಜ್ಞೆ, ತುರ್ತು ಸ್ಪಂದನೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.