ಉತ್ತಮ ನಾಗರಿಕರಾವುದೂ ದೇಶಸೇವೆ

 ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಪ್ರಯುಕ್ತ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ನಿವೃತ್ತ ಯೋಧ ಪ್ರವೀಣ್ ಶೆಟ್ಟಿ, ಪ್ರಾಂಶುಪಾಲೆ  ಡಾ.ಶೈಲಜ ವೈವಿ ಮತ್ತಿತರರಿದ್ದರು.
ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಪ್ರಯುಕ್ತ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ನಿವೃತ್ತ ಯೋಧ ಪ್ರವೀಣ್ ಶೆಟ್ಟಿ, ಪ್ರಾಂಶುಪಾಲೆ ಡಾ.ಶೈಲಜ ವೈವಿ ಮತ್ತಿತರರಿದ್ದರು.
Published on
ಮೂಲ್ಕಿ: ದೇಶದ ಪ್ರಗತಿಗೆ ಉತ್ತಮ ಶಿಕ್ಷಣ, ಶಿಸ್ತು, ಪ್ರಾಮಾಣಿಕತೆ ಮತ್ತು ರಾಷ್ಟ್ರಪ್ರೇಮ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುವ ಸಂಕಲ್ಪ ಹೊಂದಬೇಕು. ದೇಶಸೇವೆ ಕೇವಲ ಸೈನ್ಯಕ್ಕೆ ಸೇರುವುದರಿಂದ ಮಾತ್ರವಲ್ಲ, ಸಮಾಜಕ್ಕೆ ಉತ್ತಮ ನಾಗರಿಕರಾಗಿ ಸೇವೆ ಸಲ್ಲಿಸುವುದೂ ರಾಷ್ಟ್ರಸೇವೆಯೇ ಎಂದು ನಿವೃತ್ತ ಯೋಧ ಪ್ರವೀಣ್ ಶೆಟ್ಟಿ ಹೇಳಿದರು.
ಮೂಲ್ಕಿ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ವಿಜಯ ಪದವಿ ಮತ್ತು ಪದವಿ ಪೂರ್ವ ಕಾಲೇಜು ಮೂಲ್ಕಿ ಆಶ್ರಯದಲ್ಲಿ ಸೋಮವಾರ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ಮೂಲ್ಕಿ ಲಯನ್ಸ್ ಅಧ್ಯಕ್ಷ ಲಯನ್ ಪ್ರವೀಣ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಜಯ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಶೈಲಜ ವೈವಿ ಉದ್ಘಾಟಿಸಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಅರುಣ್ ಕುಮಾರ್ ಜಿ., ಲಯನ್ಸ್ ಕಾರ್ಯದರ್ಶಿ ಉದಯ ಅಮೀನ್ ಮಟ್ಟು, ಕೋಶಾಧಿಕಾರಿ ಸದಾಶಿವ ಹೊಸದುರ್ಗ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net