

ಪ್ರಗತಿಯತ್ತ ಹೆಜ್ಜೆ ಇಡುತ್ತಿರುವ ಬೆಳ್ಮಣ್‌ನಲ್ಲಿ ಮೂಲಸೌಕರ್ಯ ಸಮಸ್ಯೆಗೆ ಕೂಡಲೇ ಸ್ಪಂದಿಸುವುದು ಅವಶ್ಯಕ. ಮುಂದೊಂದು ದಿನ ದೊಡ್ಡ ದುರಂತ ಸಂಭವಿಸುವ ಮುನ್ನ ಸಂಬಂಧಪಟ್ಟ ಆಡಳಿತ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಸಂಚಾರ ವ್ಯವಸ್ಥೆ ರೂಪಿಸಬೇಕಿದೆ.
ಹೆದ್ದಾರಿಯಲ್ಲೇ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಾರ್ವಜನಿಕರು ಹಾಗೂ ಹೆದ್ದಾರಿಯಲ್ಲಿ ಓಡಾಡುವ ಇತರ ವಾಹನಗಳಿಗೂ ತೊಂದರೆಯಾಗುತ್ತದೆ. ಹೀಗಾಗಿ ಸೂಕ್ತ ಕ್ರಮದ ಅಗತ್ಯವಿದೆ.