ಬಾಸ್ಕೆಟ್‌ಬಾಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ

 ಸಿಐಎಸ್‌ಸಿಇ ವಲಯಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು.
ಸಿಐಎಸ್‌ಸಿಇ ವಲಯಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು.
Published on
ಕುಂದಾಪುರ: ಚಿಕ್ಕಮಗಳೂರಿನ ಸೇಂಟ್ ಮೇರಿಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಇತ್ತೀಚೆಗೆ ನಡೆದ ಸಿಐಎಸ್‌ಸಿಇ ವಲಯಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಶಾಲೆಯ 14 ವರ್ಷದ ಬಾಲಕಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅವರಲ್ಲಿ ಶ್ರಾವಣಿ ಪಾಟೀಲ್, ವರ್ಷಿಣಿ ಐ.ಪಿ., ಸನ್ನಿಧಿ ಬಿ., ಎಚ್.ಯಾಮಿನಿ, ಲಕ್ಷ್ಮೀ, ಆಯೀಷಾ ಎಸ್.ಎಲ್., ವೇದಶ್ರೀ, ಸಹನಾ ಎಸ್.ಕೆ., ಆರಾಧ್ಯಾ ಆರ್.ಎಚ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
14 ವರ್ಷದೊಳಗಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ವಿಕಾಸ್ ಗೌಡ, ಅಕುಲ್ ಡಿ.ಜಿ. ಮತ್ತು ಆಯುಷ್ ಹಿರೇಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕರ ತಂಡ ತೃತೀಯ ಸ್ಥಾನ ಪಡೆದುಕೊಂಡಿದ್ದು, ಅಭಿಷೇಕ್ ರಾಜಪುರ್, ಮಯೂರ್ ಪಿ.ಒ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲ ಶರಣ ಕುವಾರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net