

ಮೂಲ್ಕಿ: ಬಪ್ಪನಾಡು ಜಂಕ್ಷನ್ ಬಳಿ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೂಲ್ಕಿ ಪೊಲೀಸ್ ಠಾಣೆ ಸಿಬ್ಬಂದಿ ಬಸವರಾಜ್(28) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಡುಪಿ ಪಲಿಮಾರು ಕಡೆಯಿಂದ ಹಳೆಯಂಗಡಿಗೆ ಹೋಗುತ್ತಿದ್ದ ಇಲೆಕ್ಟ್ರಿಕ್ ಕಾರು ಬಪ್ಪನಾಡು ಜಂಕ್ಷನ್ ತಲುಪುತ್ತಿದ್ದಂತೆ ಬಪ್ಪನಾಡು ದೇವಸ್ಥಾನ ಕಡೆಯಿಂದ ಮೂಲ್ಕಿ ಪೊಲೀಸ್ ಠಾಣೆ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಬಸವರಾಜ್ ಎಂಬುವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.