ಬೈಕ್ ಅಡ್ಡಗಟ್ಟಿ 8.50 ಲಕ್ಷ ರೂ. ದರೋಡೆ

 ದರೋಡೆ ನಡೆದ ಸ್ಥಳಕ್ಕೆ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ, ಎಸ್‌ಐ ಮಂಜುನಾಥ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ದರೋಡೆ ನಡೆದ ಸ್ಥಳಕ್ಕೆ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ, ಎಸ್‌ಐ ಮಂಜುನಾಥ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
Published on

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡದ ನಿರ್ಜನ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು 8.50 ಲಕ್ಷ ರೂ. ದರೋಡೆಗೈದಿದ್ದಾರೆ.

ಸುರತ್ಕಲ್ ನಿವಾಸಿ ಮಯ್ಯದಿ ಎಂಬುವರು ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್‌ನಲ್ಲಿ ಹಾಕಿದ್ದ ಸಿಮೆಂಟ್ ಹಣ ವಸೂಲಿ ಮಾಡಿಕೊಂಡು ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಮಯ್ಯದಿ ಅವರನ್ನು ಅಡ್ಡಗಟ್ಟಿ ತಲವಾರು ತೋರಿಸಿ ದರೋಡೆಗೈದಿದ್ದಾರೆ. ಬೈಕ್ ಸವಾರನ ಬ್ಯಾಗ್‌ನಲ್ಲಿ 8.50 ಲಕ್ಷ ರೂ.ಗಳಿಗೂ ಅಧಿಕ ಹಣ ಇತ್ತು ಎನ್ನಲಾಗಿದೆ.
ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net