ಕುಂದಾಪುರ: ಕುಂದಾಪುರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಬೈಕೊಂದು ರಾ.ಹೆ.66 ರಸ್ತೆಯಲ್ಲಿ ತಲ್ಲೂರು ಸೇತುವೆಯ ಮೇಲೆ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಶಂಕರ ಅವರು ಗಾಯಗೊಂಡಿದ್ದಾರೆ. ಅವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.