ಮಣಿಪಾಲದ ಅವಿನಾಶ್ (29) ಮೃತರು. ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಅವಿನಾಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಾಗ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.