ಭಟ್ಕಳದಿಂದ ಕುಂದಾಪುರ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೋಗುತ್ತಿದ್ದ ದೀಪಕ್ ಅವರ ಬೈಕಿಗೆ ತ್ರಾಸಿ ಬೀಚ್‌ನ ಅರಮ ದೇವಸ್ಥಾನದ ಸಮೀಪ ವಿರುದ್ಧ ದಿಕ್ಕಿನಲ್ಲಿ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೊಂದು ಬೈಕ್ ಸವಾರ ಪ್ಯಾಟ್ರಿಕ್ ಹಾಗೂ ಸಹಸವಾರೆ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.