ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ಮತ್ತು ಪರವಾನಗಿ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆಯಿಡಲಾಗುತ್ತಿದೆ ಎಂದು ಸ್ವತ@ ಮದ್ಯ ಮಾರಾಟಗಾರರ ಸಂಘವೇ ಆರೋಪಿಸಿದೆ. ಇಷ್ಟೆಲ್ಲಾ ಗಂಭೀರ ಆರೋಪಗಳು ಕೇಳಿಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕರ್ನಾಟಕ ಸರ್ಕಾರ ಕಾಂಗ್ರೆಸ್ ಹೈಕಮಾಂಡ್ಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ಜನರ ದುಡ್ಡು ಪೋಲಾಗುತ್ತಿದೆ. ಅಭಿವೃದ್ಧಿ ಸ್ಥಗಿತಕೊಂಡಿದೆ ಎಂದು ಅವರು ಕಿಡಿಕಾರಿದರು.