ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಂತೆ ಕಾಣುವ, ದಪ್ಪ ಶರೀರ ಹೊಂದಿರುವ ಪುರುಷನ ಮೃತದೇಹವು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದಡಕ್ಕೆ ಕೊಚ್ಚಿ ಬಂದಿದೆ ಎನ್ನಲಾಗಿದೆ. ಮೃತದೇಹವನ್ನು ಮಂಗಲ್ಪಾಡಿ ಸರ್ಕಾರಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರೀಸುದಾರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸಬಹುದು. ಕುಂಬಳೆ ಕೋಸ್ಟಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.