ತೋಟಕ್ಕೆ ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

DEAD BODY
DEAD BODY
Published on

ಕಾಸರಗೋಡು: ಅಡಿಕೆ ಸಂಗ್ರಹಿಸಲು ತೋಟಕ್ಕೆ ತೆರಳಿದ್ದ ಮಹಿಳೆಯ ಮೃತದೇಹ ತೋಟದ ಸಮೀಪದ ತೋಡಿನಲ್ಲಿ ಪತ್ತೆಯಾಗಿದೆ. ಅಡೂರು ಪಾಂಡಿ ಮಲ್ಲಂಬಾರ ತೆಮ್ಮನಗುಂಡಿ ನಿವಾಸಿ ದಿ.ಜೋಮಣ್ಣ ನಾಯ್ಕ ಎಂಬುವರ ಪತ್ನಿ ಗುಲಾಬಿ ಬಾಯಿ(66) ಮೃತರು.

ಅಡಿಕೆ ಸಂಗ್ರಹಿಸಲು ತೋಟಕ್ಕೆ ಹೋಗುವುದಾಗಿ ಹೇಳಿ ಬುಧವಾರ ಸಂಜೆ ಮನೆಯಿಂದ ಹೊರಟಿದ್ದ ಗುಲಾಬಿ ಬಾಯಿ ಬಳಿಕ ನಾಪತ್ತೆಯಾಗಿದ್ದರು. ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ತೋಟದ ಸಮೀಪದ ತೋಡಿನ ಬದಿಯಲ್ಲಿ ಅವರ ಚಪ್ಪಲಿಗಳು ಪತ್ತೆಯಾಗಿದ್ದವು.

ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು ತೋಟದಿಂದ ಅನತಿ ದೂರದಲ್ಲಿರುವ ತಿಮ್ಮನಗುಂಡಿ ತೋಡಿನಲ್ಲಿ ಗುಲಾಬಿ ಬಾಯಿ ಅವರ ಮೃತದೇಹ ಪತ್ತೆಯಾಗಿದೆ. ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net