ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು

ಮುಳುಗು ತಜ್ಞ ಈಶ್ವರ ಮಲ್ಪೆ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಿದ್ದರು.
ಮುಳುಗು ತಜ್ಞ ಈಶ್ವರ ಮಲ್ಪೆ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಿದ್ದರು.
Published on
ಉಡುಪಿ: ತೆಂಕಪೇಟೆಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ್​ (15) ಮೃತ ಬಾಲಕ. ಕುಕ್ಕೆಹಳ್ಳಿ ಸರ್ಕಾರಿ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮ ಸಂಬಂಧಿಯೊಂದಿಗೆ ಆಗಮಿಸಿದ್ದನು. ಈ ವೇಳೆ ಭಕ್ತರು ಕೆರೆಯಲ್ಲಿ ಈಜುತ್ತಿದ್ದುದನ್ನು ಕಂಡು ಆದಿತ್ಯ ಕೂಡ ನೀರಿಗೆ ಇಳಿದಿದ್ದಾನೆ ಎನ್ನಲಾಗಿದೆ. ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ. ದೇವಸ್ಥಾನದಲ್ಲಿದ್ದವರು ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಿದ್ದರು.

ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net