ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಸಾವು

death
death
Published on
ಕಾಸರಗೋಡು: ಹೊಕ್ಕಳಿಗೆ ಸಂಬಂಧಿಸಿದ ಕಾಯಿಲೆಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿ, ಬೇಡಡ್ಕ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ-ಬುಷ್ರಾ ದಂಪತಿ ಪುತ್ರ ಮುಹಮ್ಮದ್ ಇಯಾಸ್ (9) ಮೃತಪಟ್ಟಿದ್ದಾನೆ.
ಮಂಗಳವಾರ ಬಾಲಕನನ್ನು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗ್ಗೆ ಶಸ್ತ್ರಚಿಕಿತ್ಸೆಗಾಗಿ ಕೊಠಡಿಗೆ ಕರೆದೊಯ್ಯಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಮಗುವಿನ ನಾಡಿಮಿಡಿತ ಗಣನೀಯವಾಗಿ ಕುಸಿದಿದ್ದು, ಮಧ್ಯಾಹ್ನದ ವೇಳೆಗೆ ಸಾವು ಸಂಭವಿಸಿದೆ. ಕಾಸರಗೋಡು ನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net