ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್‌ನ ಗ್ರಾಮಸಭೆಗೆ ಪೂರ್ವಭಾವಿಯಾಗಿ ನಡೆದ ವಾರ್ಡ್‌ಸಭೆಯಲ್ಲಿ ಮೂಲಸೌಕರ್ಯಗಳ ಕೊರತೆ, ರಸ್ತೆ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ವಿದ್ಯುತ್ ವ್ಯತ್ಯಯ ಸೇರಿ ಹಲವು ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಯಿತು.