ಬಾಲಕನ ಸಾವಿಗೆ ಹೃದಯಾಘಾತ ಕಾರಣ

Heart Attack
Heart Attack
Published on
ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಮೃತಪಟ್ಟ ಬಾಲಕ, ಬೇಡಡ್ಕ ತಲೆಕುನ್ನು ನಿವಾಸಿ ಅಶ್ರಫ್ ಸಖಾಫಿ ಅವರ ಪುತ್ರ ಮುಹಮ್ಮದ್ ರಿಯಾಸ್ ಸಾವಿಗೆ ಹೃದಯಾಘಾತ ಕಾರಣವೆಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಶಸ್ತ್ರಚಿಕಿತ್ಸೆ ವೇಳೆ ಯಾವುದೇ ಲೋಪ ನಡೆದಿರುವುದನ್ನು ಪರೀಕ್ಷೆಯಲ್ಲಿ ಪತ್ತೆಹಚ್ಚಲು ಸಾಧ್ಯವಾಗಿಲ್ಲವೆಂದು ತನಿಖಾಧಿಕಾರಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.
ವೈದ್ಯರ ನಿರ್ಲಕ್ಷೃ ಹಾಗೂ ಶಸ್ತ್ರಚಿಕಿತ್ಸೆಯ ಲೋಪದಿಂದ ಬಾಲಕ ಮೃತಪಟ್ಟಿರುವುದಾಗಿ ಆರೋಪಿಸಿ ಪಾಲಕರು ಪೊಲೀಸರಿಗೆ ದೂರು ನೀಡಿದ್ದರು. ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಆಸ್ಪತ್ರೆಗೆ ಮುತ್ತಿಗೆ ಯತ್ನ, ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ದು ಉನ್ನತಮಟ್ಟದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.
ಉದರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬೇಡಡ್ಕ ತಲೆಕುನ್ನು ನಿವಾಸಿ ಅಶ್ರಫ್ ಸಖಾಫಿ-ಬುಷ್ರಾ ದಂಪತಿ ಪುತ್ರ ಮುಹಮ್ಮದ್ ಇಯಾಸ್‌ಗೆ ಬುಧವಾರ ಬೆಳಗ್ಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಾಲಕನ ನಾಡಿಮಿಡಿತ ಗಣನೀಯವಾಗಿ ಕುಸಿದಿದ್ದು, ಮಧ್ಯಾಹ್ನದ ವೇಳೆಗೆ ಸಾವು ಸಂಭವಿಸಿತ್ತು. ಈ ಬಗ್ಗೆ ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net