ಹನುಮಗಿರಿಯಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ

 ಹನುಮಗಿರಿಯಲ್ಲಿ ಭಾನುವಾರ ಪಂಚಮುಖಿ ಆಂಜನೇಯ ದೇವರ ಪ್ರತಿಷ್ಠಾಪನೆ ನಡೆದ ವೇಳೆ ಕಂಚಿ ಕಾಮಕೋಟಿ ಪೀಠದ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ದೇವರಿಗೆ ಮಂಗಳಾರತಿ ಬೆಳಗಿದರು. ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ, ಕುಂಟಾರು ರವೀಶ ತಂತ್ರಿ ಮತ್ತಿತರರು ಇದ್ದರು.
ಹನುಮಗಿರಿಯಲ್ಲಿ ಭಾನುವಾರ ಪಂಚಮುಖಿ ಆಂಜನೇಯ ದೇವರ ಪ್ರತಿಷ್ಠಾಪನೆ ನಡೆದ ವೇಳೆ ಕಂಚಿ ಕಾಮಕೋಟಿ ಪೀಠದ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ದೇವರಿಗೆ ಮಂಗಳಾರತಿ ಬೆಳಗಿದರು. ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ, ಕುಂಟಾರು ರವೀಶ ತಂತ್ರಿ ಮತ್ತಿತರರು ಇದ್ದರು.
Published on
ಪುತ್ತೂರು ಗ್ರಾಮಾಂತರ: ಹೆಸರಾಂತ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರ ಮತ್ತು ಕಾರಣಿಕ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಹನುಮಗಿರಿ ಕ್ಷೇತ್ರದಲ್ಲಿ ಭಾನುವಾರ ಬೆಳಗ್ಗೆ 8.20ರಿಂದ 10.20ರೊಳಗಿನ ವೃಷಭ ಲಗ್ನ ಸುಮುಹೂರ್ತದಲ್ಲಿ ಏಕಕಾಲದಲ್ಲಿ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರು ಹಾಗೂ ಪರಿವಾರ ದೇವರ ಪುನಃಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿ, ಸಡಗರದೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಕ್ಷೇತ್ರದ ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ, ಕಂಚಿ ಕಾಮಕೋಟಿ ಪೀಠದ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಉಪಸ್ಥಿತಿಯಲ್ಲಿ, ಸಾವಿರಾರು ಮಂದಿ ಭಕ್ತರ ಮಧ್ಯೆ, ಋತ್ವಿಜರ ಮಂತ್ರೋಚ್ಛಾರಣೆಯೊಂದಿಗೆ ದೇವರ ಪುನಃ ಪ್ರತಿಷ್ಠಾಪನೆ-ಬ್ರಹ್ಮಕಲಶೋತ್ಸವ ನಡೆಯಿತು. ಪ್ರತಿಷ್ಠಾಪನೆ ಯತಿದ್ವಯರು ಮಂಗಳಾರತಿ ಬೆಳಗಿದರು.
ಪಂದಳ ರಾಜಮನೆತನದ ಮಹಾರಾಜ ಹಾಗೂ ಕೇರಳ ರಾಜ್ಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜದ ಅಧ್ಯಕ್ಷ ಪುಣರ್ತಂ ನಾರಾಯಣ ವರ್ಮ, ಮೂಡುಬಿದಿರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಆರೆಸ್ಸೆಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್, ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಧರ್ಮಶ್ರೀ ಪ್ರತಿಷ್ಠಾನದ ಮಹಾಪೋಷಕ ಜಿ.ಕೆ. ಮಹಾಬಲೇಶ್ವರ ಭಟ್ ಕೊನೆತೋಟ, ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಮ್ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ರವೀಶ್ ಪಡುಮಲೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾದ ಸಂಜೀವ ಮಠಂದೂರು, ಸೀತಾರಾಮ ರೈ ಕೆದಂಬಾಡಿಗುತ್ತು, ಬೂಡಿಯಾರು ರಾಧಾಕೃಷ್ಣ ರೈ, ಸಾಜ ರಾಧಾಕೃಷ್ಣ ಆಳ್ವ, ಶ್ರೀರಾಮ ಪಕ್ಕಳ, ಮುರಳೀಕೃಷ್ಣ ಹಸಂತಡ್ಕ, ಶಶಿಕುಮಾರ್ ರೈ ಬಾಲ್ಯೊಟ್ಟು, ಕಾವು ಹೇಮನಾಥ ಶೆಟ್ಟಿ, ರವಿಕಿರಣ ಶೆಟ್ಟಿ ಬೆದ್ರಾಡಿ, ಜೀವಂಧರ್ ಜೈನ್, ವಿದ್ಯಾ ಆರ್.ಗೌರಿ, ಪ್ರಧಾನ ಕಾರ್ಯದರ್ಶಿಗಳಾದ ಆರ್.ಸಿ.ನಾರಾಯಣ ರೆಂಜ, ನಹುಷ ಪಳನೀರು, ಸುಬ್ಬಪ್ಪ ಪಟ್ಟೆ, ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಸೇರಿದಂತೆ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು.

ಅಚ್ಚುಕಟ್ಟಿನ ವ್ಯವಸ್ಥೆಗೆ ಪ್ರಶಂಸೆ

ಹನುಮಗಿರಿಯ ಗಜಾನನ ಶಾಲಾ ಮೈದಾನದಲ್ಲಿ ಅಳವಡಿಸಲಾಗಿರುವ ವಿಶಾಲ ಪೆಂಡಲ್‌ನಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಪ್ರಸಾದ, ಬೆಳಗ್ಗೆ ಮತ್ತು ಸಂಜೆ ವಿಶೇಷ ಖಾದ್ಯಗಳನ್ನೊಳಗೊಂಡ ಉಪಾಹಾರ, ಅಲ್ಲಲ್ಲಿ ಕುಡಿಯುವ ನೀರು, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಅಚ್ಚುಕಟ್ಟಾದ ರೀತಿಯಲ್ಲಿ ಮಾಡಲಾಗಿತ್ತು. ಲವ ವೇದಿಕೆ ಹನುಮಗಿರಿ ಮತ್ತು ಕುಶ ವೇದಿಕೆ ಅಮರಗಿರಿ ಎಂಬ ಎರಡು ಪ್ರತ್ಯೇಕ ವೇದಿಕೆಗಳಲ್ಲಿ ಬ್ರಹ್ಮಕಲಶೋತ್ಸವದ 4 ದಿನಗಳ ಕಾಲವೂ ನಿರಂತರ ಬೆಳಗ್ಗಿನಿಂದ ರಾತ್ರಿ 11 ಗಂಟೆ ತನಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅತಿಥಿ ಸತ್ಕಾರ ಸೇರಿದಂತೆ ಒಟ್ಟಿನಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಜೋಡಿಸಿದ ನಳಿನ್‌ಕುಮಾರ್ ಕಟೀಲು ಸಾರಥ್ಯದ ಬ್ರಹ್ಮಕಲಶೋತ್ಸವ ಸಮಿತಿ ಪ್ರಶಂಸೆಗೆ ಪಾತ್ರವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net