ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಕಡ್ತಲ ಗ್ರಾಪಂ ಅಧ್ಯಕ್ಷ ಸುಕೇಶ ಹೆಗ್ಡೆ, ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ನಿರ್ದೇಶಕ ಸತೀಶ ಪೂಜಾರಿ ಮುಳ್ಕಾಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುದ್ರಾಡಿ ವಲಯದ ಮೇಲ್ವಿಚಾರಕಿ ಸುಮಲತಾ, ಮುನಿಯಾಲು ಪ್ರಾಥಮಿಕ ಆರೋಗ್ಯ ಕೇಂದ್ರ ಮುಖ್ಯಸ್ಥೆ ಡಾ.ಸೌಮ್ಯ, ಮಣಿಪಾಲ ಕೆಎಂಸಿ ತಜ್ಞ ವೈದ್ಯರಾದ ಡಾ.ವೃಂದಾಲತ್, ಡಾ.ವಿಧಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರಿನ ಸ್ವಾತಿ ಮೊದಲಾದವರು ಭಾಗವಹಿಸಿದ್ದರು.