ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್​; ಸವಾರ ಸಾವು

 ಆತ್ರಾಡಿ ನಿವಾಸಿ ಸನತ್​
ಆತ್ರಾಡಿ ನಿವಾಸಿ ಸನತ್​
Published on
ಉಡುಪಿ: ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್​ನಲ್ಲಿ ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್​ ಬೈಕ್​ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಮೃತರನ್ನು ಆತ್ರಾಡಿ ನಿವಾಸಿ ಸನತ್​ (21) ಎಂದು ಗುರುತಿಸಲಾಗಿದೆ. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರೊಂದಿಗೆ ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ ಬುಲೆಟ್​ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್​ನ ಗೋಪಾಲಕೃಫ್ಣಿ ದೇವಸ್ಥಾನದ ಬಳಿ ಬೈಕ್​ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸನತ್​ ಬೈಕ್​ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸನತ್​ ಅದಾಗಲೇ ಮೃತಪಟ್ಟಿದ್ದರು. ಈ ಕುರಿತು ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net