ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆ ಎದುರಿನ ಮನೆಯೊಂದರಲ್ಲಿ ಯಾರೂ ಇಲ್ಲದ್ದನ್ನು ತಿಳಿದು, ಬಾಗಿಲು ಮುರಿದು, ಒಳ ನುಗ್ಗಿದ ಕಳ್ಳರು ಚಿನ್ನ, ನಗದನ್ನು ಕಳ್ಳತನ ನಡೆಸಿರುವುದು ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಶಾರದಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರ ಪುತ್ರ ವಿಜಯ್ ನವೀನ್ ಕುಮಾರ್ ತಾಯಿಯನ್ನು ಕೋಟದಲ್ಲಿರುವ ತನ್ನ ದೊಡ್ಡಮ್ಮನ ಮನೆಯಲ್ಲಿ ಆ.8ರಂದು ಬಿಟ್ಟು ಮುಂಬೈಗೆ ತೆರಳಿದ್ದರು. ಗುರುವಾರ ಬೆಳಗ್ಗೆ ವಿಜಯ್ ವಾಪಸ್ ಮನೆಗೆ ಬಂದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ.
ಮನೆಯ ಎದುರಿನ ಬಾಗಿಲಿನ ಚಿಲಕವನ್ನು ಮುರಿದು, ಗೋದ್ರೇಜ್‌ನಲ್ಲಿದ್ದ 8 ಗ್ರಾಂ ತೂಕದ ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿ ಸೇರಿ 95 ಸಾವಿರ ರೂ. ಮೌಲ್ಯದ ಚಿನ್ನ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಗೌಡ, ನಗರ ಠಾಣಾ ಪಿಎಸ್‌ಐ ಪುಷ್ಪಾ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.