ಉದ್ಯಮಿಗೆ 87 ಲಕ್ಷ ರೂ. ವಂಚನೆ

Crime
Crime
Published on
ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ 36ರ ಹರೆಯದ ಉದ್ಯಮಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ/ ಬೆಂಗಳೂರು ಮೂಲದ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್‌ನಲ್ಲಿ ಮಾತುಕತೆ ನಡೆಸುತ್ತಿದ್ದರು.
ಈ ವೇಳೆ ಯುವತಿ ವ್ಯವಹಾರದಲ್ಲಿ ಆರ್ಥಿಕ ತೊಂದರೆ ಉಂಟಾಗಿದೆ ಎಂದು ಹೇಳಿ ಬೇರೆ ಬೇರೆ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಹಾಗೂ ತನ್ನ ಖಾತೆ ಮತ್ತು ಗೂಗಲ್ ಪೇ ಮೂಲಕ ಹಂತ ಹಂತವಾಗಿ ಹಣ ವರ್ಗಾಯಿಸಿಕೊಳ್ಳುತ್ತಿದ್ದಳು. ಒಟ್ಟು 87,22,710 ರೂ. ಪಡೆದುಕೊಂಡ ಬಳಿಕ ಆರೋಪಿ ಅನಿಷಾ ಪಾಲನ್ನ ಮೊಬೈಲ್ ಸಂಪರ್ಕಕ್ಕೂ ಸಿಗದೆ, ಹಣವನ್ನು ಹಿಂದಿರುಗಿಸದೆ ವಂಚಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net