ರಸ್ತೆ ದಾಟುತ್ತಿದ್ದ ಅಬ್ದುಲ್ ರೆಹಮಾನ್ಗೆ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್ನನ್ನು ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ದಾರಿ ಮಧ್ಯೆಯೇ ಮೃತಪಟ್ಟನೆಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಯು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾನೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.