ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ

 ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿಯಾಗಿರುವುದು.
ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿಯಾಗಿರುವುದು.
Published on
ಕಾರ್ಕಳ: ಬೆಳ್ಮಣ್ ಪಂಚಾಯಿತಿ ಮುಂಭಾಗ ಬುಧವಾರ ಸಂಜೆ ವೇಳೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಕಾರೊಂದು ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ನಂದಳಿಕೆಯ ಕ್ರಷರ್‌ನಿಂದ ಜಲ್ಲಿ ತುಂಬಿಸಿಕೊಂಡು ಕಾರವಾರ ಕಡೆಯತ್ತ ಸಾಗಲು ಹೊರಟಿದ್ದ ಲಾರಿ ಬೆಳ್ಮಣ್ ಪಂಚಾಯಿತಿ ಮುಂಭಾಗದ ಪಾರ್ಕಿಂಗ್ ಪ್ರದೇಶದ ರಸ್ತೆ ಬದಿಯಲ್ಲಿ ನಿಂತಿದ್ದ ಸಂದರ್ಭ ಮೂಡಿಗೆರೆಯಿಂದ ಪಡುಬಿದ್ರಿ ಕಡೆಯತ್ತ ಸಾಗುತ್ತಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಸೇರಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಜೆಯ ವೇಳೆಗೆ ಈ ಭಾಗದಲ್ಲಿ ಹೆದ್ದಾರಿಯ ಎರಡೂ ಬದಿಯಲ್ಲಿ ಸಾಲುಗಟ್ಟಿ ಲಾರಿ, ಟಿಪ್ಪರ್‌ಗಳು ನಿಲ್ಲುವುದರಿಂದ ಇಂಥಹಾ ಅಪಘಾತಗಳು ನಡೆಯುತ್ತವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net