

ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಎಂಬಲ್ಲಿ ಶನಿವಾರ ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಪಿಕಪ್ ವಾಹನ ಕಾರಿಗೆ ಡಿಕ್ಕಿಯಾಗಿದೆ. ಕಾರು ಚಾಲಕ ಅರುಣ ಡಿಸೋಜ ಗಾಯಗೊಂಡಿದ್ದು, ತಕ್ಷಣ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿವೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.