ತಡೆರಹಿತ ಬಸ್ಸಿಗೆ ಕಾರು ಡಿಕ್ಕಿ

ACCIDENT
ACCIDENT
Published on

ಮೂಲ್ಕಿ: ಕಾರ್ನಾಡ್ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆರಹಿತ ಬಸ್‌ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.

ಗಾಯಾಳುಗಳನ್ನು ಕಾರು ಚಾಲಕ, ಆಂಧ್ರಪ್ರದೇಶದ ಚಿತ್ತೂರು ನಿವಾಸಿಗಳಾದ ಸುಕುಮಾರ್ (27) ಮತ್ತು ಭಾನುಪ್ರಕಾಶ್ (27) ಎಂದು ಗುರುತಿಸಲಾಗಿದೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಉಂಟಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net