ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ

ACCIDENT
ACCIDENT
Published on

ಮೂಡುಬಿದಿರೆ: ಪಾಲಡ್ಕದ ಬಿಳಿತೋಟ ಕ್ರಾಸ್ ಬಳಿ ಭಾನುವಾರ ಚಾಲಕನಿಗೆ ನಿದ್ದೆ ಮಂಪರು ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿರುದ್ಧ ದಿಕ್ಕಿಗೆ ಚಲಿಸಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಆಳವಾದ ಕಂದಕಕ್ಕೆ ಉರುಳುವುದು ತಪ್ಪಿದೆ. ಇದೇ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರನ್ನು ಗಮನಿಸಿದ ದ್ವಿಚಕ್ರ ವಾಹನ ಸವಾರ ಸಮಯಪ್ರಜ್ಞೆಯಿಂದ ವಾಹನ ತಿರುಗಿಸಿ ಅಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net