ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡ್ ಬಂಟರ ಭವನದ ಎದುರುಗಡೆ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಕೋಲ್ನಾಡ್ ತಲುಪುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು ಚಾಲಕ ಮಂಗಳೂರು ನಿವಾಸಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ದಿಯಾಂಕ್ ಡಿ.ಬೇಕಲ್ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ.