ಕಳತ್ತೂರಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

 ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿರುವುದು.
ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿರುವುದು.
Published on
ಹೆಬ್ರಿ: ಕಳತ್ತೂರು ಶಾಲೆ ಬಳಿ ಶನಿವಾರ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಬ್ರಹ್ಮಾವರದ ಚಾಂತಾರು ನಿವಾಸಿ ಪ್ರವೀಣ್ ಮುದ್ದೂರು ಅವರು ಹೆಬ್ರಿಯಿಂದ ಚಾಂತಾರು ಕಡೆಗೆ ಬರುತ್ತಿದ್ದ ವೇಳೆ ಕಳತ್ತೂರು ಶಾಲೆ ಬಳಿ ಅಪಘಾತವಾಗಿದೆ.
ಬ್ರಹ್ಮಾವರ ಕಡೆಯಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಕಾರಿನ ಚಾಲಕ ಶಿವರಾಜ್ ನಿರ್ಲಕ್ಷ್ಯತನದಿಂದ ಚಲಾಯಿಸಿ ರಸ್ತೆಯ ತೀರಾ ಬಲಭಾಗಕ್ಕೆ ಬಂದು ಪ್ರವೀಣ್ ಕಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net