ಆರೋಪಿಗಳು ಒಂದು ವಾರದಿಂದ ವಿವಿಧೆಡೆಗಳಿಂದ ಜಾನುವಾರು ಕಳ್ಳತನ ಮಾಡುತ್ತಿದ್ದು, ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ಮನೆ ಬಳಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ಕರು, ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮಹಮ್ಮದ್ ಆರೀಫ್ ವಿರುದ್ಧ ಬಜ್ಪೆ, ಮೂಡುಬಿದಿರೆ ಠಾಣೆಯಲ್ಲಿ ಜಾನುವಾರು ಹತ್ಯೆ ತಡೆ ಕಾಯ್ದೆ ಸೇರಿದಂತೆ 4 ಪ್ರಕರಣ ದಾಖಲಾಗಿದೆ. ಮತ್ತೊಬ್ಬ ಆರೋಪಿ ಇಮ್ರಾನ್ ವಿರುದ್ಧ ಮೂಡುಬಿದಿರೆ, ಕಾರ್ಕಳ ನಗರ ಠಾಣೆಗಳಲ್ಲಿ ಎನ್‌ಡಿಪಿಎಸ್, ಕೆಪಿ ಆಕ್ಟ್, ಜಾನುವಾರು ಕಳ್ಳತನಕ್ಕೆ ಸಂಬಂಧಿಸಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.