ಆರೋಪಿಗಳು ಸಂಘಟಿತವಾಗಿ ಈ ಕೃತ್ಯ ನಡೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳ ಜಾಮೀನು ರದ್ದುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೊಹಮ್ಮದ್ ಯೂನಿಸ್, ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು , ಮೊಹಮ್ಮದ್ ನಾಸಿರ್ ಹಾಗೂ ಮತ್ತೊಬ್ಬ ಆರೋಪಿ ಶೌಕತ್ ಅಲಿ (36) ಇವರುಗಳನ್ನು ಮರುಬಂಧನ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.