ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯ ವರೆಗೆ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಅಲ್ಲದೆ, ಪರ್ಕಳದಿಂದ ಉಡುಪಿ ಕರಾವಳಿ ಜಂಕ್ಷನ್ ವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದುಪ್ರಕಟಣೆಯಲ್ಲಿ ತಿಳಿಸಿದ್ದಾರೆ.