1957ರಲ್ಲಿ ನಿರ್ಮಾಣವಾದ ಬೆಳ್ತಂಗಡಿ ಸೇತುವೆ ತೆರವು ಕಾರ್ಯ ಪ್ರಗತಿಯಲ್ಲಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಈಗಾಗಲೇ ಇಲ್ಲಿ ಹೊಸ ಸೇತುವೆ ನಿರ್ಮಾಣವಾಗಿದ್ದು ವಾಹನಗಳು ಸಂಚರಿಸುತ್ತಿವೆ. ಹಳೇ ಸೇತುವೆ ಇರುವ ಪ್ರದೇಶದಲ್ಲಿ ಇನ್ನೊಂದು ಹೊಸ ಸೇತುವೆ ನಿರ್ಮಾಣವಾಗಬೇಕಿದ್ದು, ಅದಕ್ಕಾಗಿ ಸೇತುವೆ ತೆರವುಗೊಳಿಸಲಾಗುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣವಾಗ ಬೇಕಿದ್ದು, ಈಗಾಗಲೇ ಮುಖ್ಯ ಸೇತುವೆ ಹಾಗೂ ಒಂದು ಬದಿಯ ಸರ್ವೀಸ್ ರಸ್ತೆಯ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನೊಂದು ಬದಿಗೆ ಸೇತುವೆ ನಿರ್ಮಾಣಗೊಳ್ಳಲಿದೆ. ಟೆಂಡರ್ ಅವಧಿ ಪ್ರಕಾರ ಹೆದ್ದಾರಿ ಕಾಮಗಾರಿ 2026 ಡಿಸೆಂಬರ್ ಅಂತ್ಯಕ್ಕೆ ಮುಗಿಯಬೇಕಿದೆ. ಆದರೆ ಜೂನ್ ತಿಂಗಳಿನಿಂದ ಮಳೆಗಾಲ ಆರಂಭವಾಗುವ ಕಾರಣದಿಂದ ಇನ್ನೊಂದು ಹೊಸ ಸೇತುವೆ ನಿರ್ಮಾಣಗೊಳ್ಳುವುದು ಬಹುತೇಕ ಅನುಮಾನ.