ರಾಜ್ಯಾದ್ಯಂತ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 427 ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಲಾಗುತ್ತಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 1,000ದಿಂದ -1,500 ಅಡಿಗೆ ಕುಸಿದಿರುವ ಅಂತರ್ಜಲ ಮಟ್ಟವನ್ನು 250 ಅಡಿಗೆ ತರುವ ಗುರಿ ಹೊಂದಲಾಗಿದೆ. ಕೆ.ಸಿ. ವ್ಯಾಲಿ, ಹೆಚ್.ಎನ್. ವ್ಯಾಲಿ, ವೃಷಭಾವತಿ ವ್ಯಾಲಿ ಯೋಜನೆಗಳಿಂದ 700 ಕೆರೆಗಳನ್ನು ತುಂಬಿಸಿ 6 ಜಿಲ್ಲೆಗಳ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ಈ ಯೋಜನೆಗಳಿಗೆ ಬೆಂಗಳೂರಿನ ಸಂಸ್ಕರಿಸಿದ ನೀರನ್ನು ಬಳಸಲಾಗುತ್ತಿದೆ ಎಂದು ತಿಳಿಸಿದರು.