ಮಕ್ಕಳಿಗೆ ತುಳುನಾಡಿನ ಆಚರಣೆ ಅರಿವು

 ಆಟಿ ಅಮಾವಾಸ್ಯೆ ಆಚರಣೆ ಕಾರ್ಯಕ್ರಮವನ್ನು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ.ಸೇಸಪ್ಪ ರೈ ಉದ್ಘಾಟಿಸಿರು. ಪ್ರಮುಖರಾದ ಕೆ.ಸೇಸಪ್ಪ ರೈ, ಪ್ರಕಾಶ್ ಗೌಡ, ಆನಂದ ಎಸ್.ಟಿ. ಮೊದಲಾದವರು ಉಪಸ್ಥಿತರಿದ್ದರು.
ಆಟಿ ಅಮಾವಾಸ್ಯೆ ಆಚರಣೆ ಕಾರ್ಯಕ್ರಮವನ್ನು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ.ಸೇಸಪ್ಪ ರೈ ಉದ್ಘಾಟಿಸಿರು. ಪ್ರಮುಖರಾದ ಕೆ.ಸೇಸಪ್ಪ ರೈ, ಪ್ರಕಾಶ್ ಗೌಡ, ಆನಂದ ಎಸ್.ಟಿ. ಮೊದಲಾದವರು ಉಪಸ್ಥಿತರಿದ್ದರು.
Published on

ಕಡಬ: ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಸಿಗುವ ಔಷಧೀಯ ಆಹಾರಗಳನ್ನು ಸೇವಿಸಿ ಆರೋಗ್ಯಯುತ ಜೀವನ ನಡೆಸುತ್ತಿದ್ದರು. ಆಟಿ ತಿಂಗಳ ಆಚರಣೆಗಳಿಗೂ ವಿಶೇಷ ಅರ್ಥವಿದೆ. ಇದೆಲ್ಲವನ್ನೂ ಮಕ್ಕಳಿಗೆ ತಿಳಿಸಿಕೊಡುವ ಕೆಲಸ ಆಗಬೇಕು ಎಂದು ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ಹೇಳಿದರು.

ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ಹಾಗೂ ನೇತ್ರಾವತಿ ತುಳುಕೂಟ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಕೆ.ಸೇಸಪ್ಪ ರೈ ಉದ್ಘಾಟಿಸಿದರು. ಶಾಲಾ ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ಪ್ರಕಾಶ್ ಗೌಡ, ಶಾಲಾ ಆಡಳಿತಾಧಿಕಾರಿ ಆನಂದ ಎಸ್.ಟಿ., ಶ್ರೀ ರಾಮಕುಂಜೇಶ್ವರ ವಿದ್ಯಾಲಯ ಸಿಬಿಎಸ್‌ಇ ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ಗುರುರಾಜ್ ರೈ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಲ ಶಾಖಾ ವ್ಯವಸ್ಥಾಪಕಿ ಆಶಾ, ಪತ್ರಕರ್ತ ಹರೀಶ್ ಬಾರಿಂಜ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಲೋಹಿತಾ ಸ್ವಾಗತಿಸಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ರಮೇಶ್ ರೈ ವಂದಿಸಿದರು. ಶಿಕ್ಷಕರಾದ ವಸಂತ್, ಸರಿತಾ ಜನಾರ್ದನ, ಸಂಚಿತಾ ನಿರೂಪಿಸಿದರು. ಆಟಿ ಅಮಾವಾಸ್ಯೆ ಪ್ರಯುಕ್ತ 80ಕ್ಕೂ ಹೆಚ್ಚು ಬಗೆಯ ಖಾದ್ಯಗಳನ್ನು ಪ್ರದರ್ಶಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net