ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ಜಂಟಿ ಸಮರದಿಂದ ಜಗತ್ತು ಸಮಸ್ಯೆ ಅನುಭವಿಸುವಂತಾಗಿದೆ. ಯಾರಿಗೂ ಯುದ್ಧ ಬೇಡ, ಶಾಂತಿ ಬೇಕು. ಎಲ್ಲರಿಗೂ ಬದುಕಲು ಬಿಡಿ. ಜಾಗತಿಕ ಮಟ್ಟದ ಸಹಬಾಳ್ವೆ, ಶಾಂತಿ, ಸೌಹಾರ್ದತೆ, ಪರಸ್ಪರ ಹೊಂದಾಣಿಕೆ, ಮಾನವ ಪ್ರೀತಿ, ಪರಿಸರ ಕಾಳಜಿ, ನಮ್ಮ ಮಕ್ಕಳ ಭವಿಷ್ಯಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ರಾಮಾಂಜಿ ಆಶಿಸಿದರು.