ಸಿಎಂ ಪರಿಹಾರ ಧನ ಮಂಜೂರಾತಿ ಪತ್ರ ಹಸ್ತಾಂತರ

 ಲಾವಣ್ಯಾ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಮುಖ್ಯಮಂತ್ರಿಗಳ ಪರಿಹಾರ ಧನ ಮಂಜೂರಾತಿ ಪತ್ರ ಹಸ್ತಾಂತರಿಸಿದರು. ಪ್ರಮುಖರಾದ ಕೆ.ಮಾಯಿಲಪ್ಪ ಸಾಲ್ಯಾನ್, ಉಮಾನಾಥ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಯು.ಟಿ.ತೌಸೀಫ್ ಮೊದಲಾದವರು ಉಪಸ್ಥಿತರಿದ್ದರು.
ಲಾವಣ್ಯಾ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಮುಖ್ಯಮಂತ್ರಿಗಳ ಪರಿಹಾರ ಧನ ಮಂಜೂರಾತಿ ಪತ್ರ ಹಸ್ತಾಂತರಿಸಿದರು. ಪ್ರಮುಖರಾದ ಕೆ.ಮಾಯಿಲಪ್ಪ ಸಾಲ್ಯಾನ್, ಉಮಾನಾಥ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಯು.ಟಿ.ತೌಸೀಫ್ ಮೊದಲಾದವರು ಉಪಸ್ಥಿತರಿದ್ದರು.
Published on
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಲಾವಣ್ಯಾ ನಿವಾಸಕ್ಕೆ ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಭೇಟಿ ನೀಡಿ ಸರ್ಕಾರದಿಂದ ಮಂಜೂರಾದ ಮುಖ್ಯಮಂತ್ರಿಗಳ ಪರಿಹಾರ ಧನ 10 ಲಕ್ಷ ರೂ.ಗಳ ಮಂಜೂರಾತಿಪತ್ರವನ್ನು ಪಾಲಕರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿ, ಬಾಳಪ್ಪ ಗೌಡ ಬಹಳ ಕಷ್ಟದಲ್ಲಿ ಮೂವರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ಮನೆಗೆ ಆಧಾರವಾಗಬೇಕಿದ್ದ ಲಾವಣ್ಯಾ ನಿಧನದಿಂದ ಕುಟುಂಬ ಕಂಗಾಲಾಗಿದೆ. ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ನನ್ನ ವಿನಂತಿ ಮೇರೆಗೆ ಮಾನವೀಯತೆ ನೆಲೆಯಲ್ಲಿ ಸಿಎಂ 10 ಲಕ್ಷ ರೂ. ಪರಿಹಾರ ಧನ ಮಂಜೂರುಗೊಳಿಸಿದ್ದಾರೆ. ಕೊಯಿಲ ಪಶು ವೈದ್ಯಕೀಯ ಕಾಲೇಜಿನಲ್ಲಿ ಲಾವಣ್ಯಾ ಸಹೋದರಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
ಪ್ರಮುಖರಾದ ಕೆ.ಮಾಯಿಲಪ್ಪ ಸಾಲ್ಯಾನ್, ಪುತ್ತೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ, ಯು.ಟಿ.ತೌಸೀಫ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಜಯಪ್ರಕಾಶ್ ಬದಿನಾರು, ಸಂಜೀವ ಗೌಡ, ಅಬ್ದುಲ್ ರಹಿಮಾನ್, ಬಾಬು ನಾಯ್ಕ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net