ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ನಡೆಸಿದ ಆಡಳಿತ ಯಾರಿಗೂ ಸಮಾಧಾನ ತಂದಿಲ್ಲ. ರಾಜ್ಯದಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ಸೇತುವೆ, ಚರಂಡಿ, ಆರೋಗ್ಯ, ಆರ್ಥಿಕ, ಕಾನೂನು ಸುವ್ಯವಸ್ಥೆಗಳಲ್ಲಿ ಸಿದ್ದರಾಮಯ್ಯ ಅವರ ಆಡಳಿತ ಸಂಪೂರ್ಣ ಹದಗೆಟ್ಟು ಹೋಗಿದೆ. ರಾಜ್ಯದ ಜನತೆಯ ಹಿತರಕ್ಷಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು.