

ಉಡುಪಿ: ಉಡುಪಿ ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿದ್ದ ಸರ್ಕಾರಿ ಜಿಲ್ಲಾಸ್ಪತ್ರೆಯ ನಿಮಾರ್ಣ ಕಾಮಗಾರಿ 2021ರ ಡಿಸೆಂಬರ್ನಲ್ಲಿ ಪ್ರಾರಂಭಗೊಂಡಿದ್ದು, ಎರಡು ವರ್ಷದಿಂದ ಮುಕ್ತಾಯದ ಹಂತದಲ್ಲೇ ಸ್ಥಗಿತಗೊಂಡಿದೆ. ಬಾಕಿ ಕೆಲಸ ಶ್ರೀ ಮುಗಿಸಿ ಉದ್ಘಾಟಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಅರ್ಪಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ (ಸೆ.22) ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಯಶ್ಪಾಲ್, 250 ಹಾಸಿಗೆಗಳ ಈ ಜಿಲ್ಲಾಸ್ಪತ್ರೆಗೆ ಪೂರ್ಣ ಪ್ರಮಾಣದಲ್ಲಿ ಅಗತ್ಯ ಸೌಲಭ್ಯ, ಚಿಕಿತ್ಸಾ ಪರಿಕರಗಳು, ಸೂಕ್ತ ಸಿಬ್ಬಂದಿ ನಿಯೋಜಿಸಬೇಕು ಎಂದು ಆಗ್ರಹಿಸಿದರು.
ಬ್ರಹ್ಮಾವರ ಆಸ್ಪತ್ರೆ ಮೇಲ್ದರ್ಜೆಗೇರಿಸಿ
ಎಂಟು ವರ್ಷದ ಹಿಂದೆ ಬ್ರಹ್ಮಾವರವು ತಾಲೂಕು ಕೇಂದ್ರವಾಗಿದ್ದು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವು 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದೆ. ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭಿಸುವಂತಾಗಲು ಈ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್, ಎಲ್ಲ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಉಡುಪಿ ನಗರದಲ್ಲಿರುವ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು. ಅಲ್ಲದೆ, ಆಸ್ಪತ್ರೆಯ ಮುಂಭಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಬಿ.ಆರ್. ಶೆಟ್ಟಿ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಮಗಾರಿ ನಡೆದಿದೆ. ಕಟ್ಟಡದಲ್ಲಿ ವಾಹನ ಪಾರ್ಕಿಂಗ್ಗಾಗಿ 30 ಅಡಿಗೂ ಹೆಚ್ಚು ಅಗೆತ ಮಾಡಿದ್ದಾರೆ. ಇಲ್ಲಿಯೇ ಸರ್ಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿ ಎಂದು ಸಚಿವ ಖಾದರ್ಗೆ ಯಶ್ಪಾಲ್ ವಿನಂತಿಸಿದರು.