ರಾಯರ ಸ್ಮರಣೆಯಿಂದ ಏಕಾಗ್ರತೆ ವೃದ್ಧಿ

 ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿವಪ್ರಸಾದ್ ಅಜಿಲ, ನಾರಾಯಣ ಬೇಗೂರು, ಸುಶೀಲಾ ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿವಪ್ರಸಾದ್ ಅಜಿಲ, ನಾರಾಯಣ ಬೇಗೂರು, ಸುಶೀಲಾ ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ರಾಘವೇಂದ್ರ ಸ್ವಾಮಿಗಳ ಸ್ಮರಣೆ ಮತ್ತು ಆರಾಧನೆಯಿಂದ ಏಕಾಗ್ರತೆ ವೃದ್ಧಿಸುತ್ತದೆ. ರಾಯರ ಸ್ಮರಣೆ ಮಾಡುವ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ. ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೇವಳ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಹೇಳಿದರು.
ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿ,ಎಲ್ಲರ ಸಹಕಾರ ಹಾಗೂ ಗುರುಗಳ ಆಶೀರ್ವಾದದಿಂದ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ. ಭಕ್ತರು ಹಾಗೂ ದಾನಿಗಳ ಸಹಕಾರದಿಂದ ಮಠದ ಕಾರ್ಯಚಟುವಟಿಕೆ ಉತ್ತಮವಾಗಿ ನಡೆಯುತ್ತಿದ್ದು, ಭಕ್ತರಿಂದ ಬರುವ ದೇಣಿಗೆ ದುಂದುವೆಚ್ಚ ಮಾಡದೆ ಸಮರ್ಪಕವಾಗಿ ಬಳಸಲಾಗುತ್ತಿದೆ ಎಂದರು.
ಚಿಕ್ಕಬಳ್ಳಾಪುರದ ನಾಗನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಸುಶೀಲಾ ಪ್ರಿಯದರ್ಶಿನಿ ಉಪಸ್ಥಿತರಿದ್ದರು. ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ತುಕರಾಮ್ ಬಿ., ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ನಿರ್ಮಿತ್ ಕನ್‌ಸ್ಟ್ರಕ್ಷನ್‌ನ ಹರೀಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.
ಪ್ರತಿಷ್ಠಾನದ ಟ್ರಸ್ಟಿ ಡಾ.ಬಿ.ಎ.ಕುಮಾರ ಹೆಗ್ಡೆ ಸ್ವಾಗತಿಸಿದರು. ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು. ಸುಧಾಮಣಿ ರಮಾನಂದ ನಿರೂಪಿಸಿದರು.

ಗುರುಬಲ ಇದ್ದಲ್ಲಿ ಯಾವುದನ್ನೂ ಜಯಿಸಬಹುದು. ರಾಘವೇಂದ್ರ ಸ್ವಾಮಿಗಳ ಭಕ್ತನಾಗಿದ್ದು, ಗುರುಗಳ ಅನುಗ್ರಹದಿಂದ ಜೀವನದ ಕಷ್ಟಗಳು ಪರಿಹಾರವಾಗಿವೆ.

— ಸುಮಂತ್ ಕುಮಾರ್ ಜೈನ್, ಅಧ್ಯಕ್ಷ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆ

ಮಂತ್ರಾಲಯದಲ್ಲಿ ತುಂಗಾ ನದಿ ತೀರದಲ್ಲಿ ರಾಘವೇಂದ್ರ ಸ್ವಾಮಿಗಳ ಮಠವಿರುವಂತೆ ಲಾಯಿಲದಲ್ಲಿ ಸೋಮಾವತಿ ನದಿ ತೀರದಲ್ಲಿ ಮಠವಿರುವುದು ಹೆಮ್ಮೆಯ ಸಂಗತಿ. ಮಠದ ಅಭಿವೃದ್ಧಿಗೆ ತಡೆಗೋಡೆ ಹಾಗೂ ಬೋರ್ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು.

— ರಕ್ಷಿತ್ ಶಿವರಾಂ, ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net