ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ. ಅಲ್ಲದೆ ಪರ್ಯಾಯ ಮಹೋತ್ಸವದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.