ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಭಾಗದ ಬಡವರಿಗೆ ಕೆಲಸದ ಹಕ್ಕನ್ನು ನೀಡುವ ಉದ್ದೇಶದಿಂದ ಜಾರಿಗೆ ತಂದ ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರವು ಹಂತ ಹಂತವಾಗಿ ದುರ್ಬಲಗೊಳಿಸುತ್ತಿದೆ. ಯೋಜನೆಯ ಹೆಸರನ್ನು 'ಎಬಿ-ಗ್ರಾಮ್-ಜಿ' ಎಂದು ಬದಲಾಯಿಸಿರುವುದು ಕೇವಲ ಹೆಸರಿನ ಬದಲಾವಣೆಯಲ್ಲ, ಇದು ಯೋಜನೆಯ ಮೂಲ ಸ್ವರೂಪವನ್ನೇ ನಾಶಮಾಡುವ ಹುನ್ನಾರ ಎಂದು ಆರೋಪಿಸಿದರು.