ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗದ ಸಮಾಜಮುಖಿ ಕಾರ್ಯ ಶ್ಲಾಘನೀಯ. ಕಲಾರಂಗದ ಕಾರ್ಯಕರ್ತರ ಪರಿಶ್ರಮ, ಯಕ್ಷಶಿಕ್ಷಣ ಟ್ರಸ್ಟ್ನ ಉದ್ದೇಶ ಈಡೇರುವಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರ ತೊಡಗಿಸಿಕೊಳ್ಳುವಿಕೆಯೂ ಬಹಳ ಮುಖ್ಯ. ಶೈಕ್ಷಣಿಕ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಯಕ್ಷಗಾನವನ್ನೂ ಕಲಿತರೆ ಅವರ ಜ್ಞಾನವೂ ವೃದ್ಧಿಯಾಗುತ್ತದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅನಿಸಿಕೆ ವ್ಯಕ್ತಪಡಿಸಿದರು.