ಕ್ರೀಡಾ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ

 ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಷರ್ದ ಕ್ರೀಡಾ ಚಟುವಟಿಕೆಗಳಿಗೆ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಚಾಲನೆ ನೀಡಿದರು. ಪ್ರಮುಖರಾದ ರಮೇಶ್ ಎಚ್., ಶಾರದಾ, ಕೃಷ್ಣಾನಂದ ರಾವ್, ಸಂದೇಶ್, ಸಂಜೀವ ಕುಲಾಲ್, ಸುದೀನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Published on
ಬೆಳ್ತಂಗಡಿ: ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ. ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಶಿಸ್ತು, ಬದ್ಧತೆ ಹಾಗೂ ನಿರಂತರ ಪರಿಶ್ರಮ ಅಗತ್ಯವಾಗಿದ್ದು, ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಹೇಳಿದರು.
ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಷರ್ದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್. ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ, ಕ್ರೀಡಾ ಸಂಘದ ವಿವಿಧ ಕ್ರೀಡೆಗಳ ತರಬೇತುದಾರರಾದ ಕೃಷ್ಣಾನಂದ ರಾವ್, ಸಂದೇಶ್, ಸಂಜೀವ ಕುಲಾಲ್, ಸುದೀನ್ ಪೂಜಾರಿ, ಜಸ್ವಂತ್ ಹಾಗೂ ವೀಕ್ಷಿತಾ ಹೆಮೋದರ್, ಕ್ರೀಡಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಿಯಾಂಕಾ ಸ್ವಾಗತಿಸಿದರು. ಪ್ರವೀಣ್ ವಂದಿಸಿದರು. ತನುಶ್ರೀ ನಿರೂಪಿಸಿದರು.
------- ಫೋಟೋ -------
ಬಿಇಎಲ್-ಜು-07-ಫೈಲ್-01 :
ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಷರ್ದ ಕ್ರೀಡಾ ಚಟುವಟಿಕೆಗಳಿಗೆ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಚಾಲನೆ ನೀಡಿದರು. ಪ್ರಮುಖರಾದ ರಮೇಶ್ ಎಚ್., ಶಾರದಾ, ಕೃಷ್ಣಾನಂದ ರಾವ್, ಸಂದೇಶ್, ಸಂಜೀವ ಕುಲಾಲ್, ಸುದೀನ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net