ಪ್ರಾಚೀನ ಗ್ರಂಥಗಳ ಸಂರಕ್ಷಣೆಗೆ ಸಹಕಾರ

ಮೂಡುಬಿದಿರೆಯಲ್ಲಿ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಚಾಲನೆ ನೀಡಿದರು. ಡಾ.ಜಿ.ವಿ.ಕಲ್ಲಾಪುರ, ಡಾ.ವೆಂಕಟೇಶ್ ಎಂ.ಗಿರಿ, ಡಾ. ಕೆ.ಎಸ್.ಎನ್.ಉಡುಪ, ಸಂಜಯಂತ ಕುಮಾರ್ ಶೆಟ್ಟಿ ಮತ್ತಿತರರಿದ್ದರು.

Published on
ಮೂಡುಬಿದಿರೆ: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯಕ್ರಮದ ಅಂಗವಾಗಿ ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಮೂಡುಬಿದಿರೆಯಲ್ಲಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಚಾಲನೆ ನೀಡಿದರು.
ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಮಾತನಾಡಿ, ಜಿಲ್ಲೆಯ ಸಾರ್ವಜನಿಕರು ತಮ್ಮ ಬಳಿ ಇರುವ ಪ್ರಾಚೀನ ಗ್ರಂಥಗಳನ್ನು ಸಮೀಕ್ಷೆಗೆ ಒದಗಿಸುವ ಮೂಲಕ ಅವುಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಶ್ರೀಮಠ ಹಾಗೂ ರಮಾ ರಾಣಿ ಶೋಧ ಸಂಸ್ಥಾನದ ಸಂಗ್ರಹದಲ್ಲಿರುವ ತಾಳೆ ಓಲೆ ಹಸ್ತಪ್ರತಿಗಳ ಸಮೀಕ್ಷೆ ನಡೆಸಲಾಯಿತು. ಡಾ.ಜಿ.ವಿ.ಕಲ್ಲಾಪುರ, ಡಾ.ವೆಂಕಟೇಶ್ ಎಂ.ಗಿರಿ, ಡಾ.ಕೆ.ಎಸ್.ಎನ್.ಉಡುಪ, ಶ್ರವಣ ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net