ಕುಲಾಲ ಸಮಾಜದ ಪ್ರಗತಿಗೆ ಸಹಕಾರ

 ಬೆಳ್ತಂಗಡಿ ಕುಲಾಲ ಮಂದಿರದಲ್ಲಿ ಶಾಸಕ ಹರೀಶ್ ಪೂಂಜ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ವಿಶ್ವನಾಥ ಮೂಲ್ಯ, ಯಾದವ ಮೂಲ್ಯ, ಪ್ರಮೋದ್ ಕುಲಾಲ್ ಮೊದಲಾದವರಿದ್ದರು.
ಬೆಳ್ತಂಗಡಿ ಕುಲಾಲ ಮಂದಿರದಲ್ಲಿ ಶಾಸಕ ಹರೀಶ್ ಪೂಂಜ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ವಿಶ್ವನಾಥ ಮೂಲ್ಯ, ಯಾದವ ಮೂಲ್ಯ, ಪ್ರಮೋದ್ ಕುಲಾಲ್ ಮೊದಲಾದವರಿದ್ದರು.
Published on

ಬೆಳ್ತಂಗಡಿ: ತಾಲೂಕು ಮೂಲ್ಯರ ಯಾನೆ ಕುಲಾಲ ಸಂಘದ ಸಭಾಭವನ ನಿರ್ಮಾಣಕ್ಕೆ 1.50 ಕೋಟಿ ರೂ. ಅನುದಾನ ಮಂಜೂರುಗೊಳಿಸಿದ್ದೇನೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ಕುಲಾಲ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ, ಕುಲಾಲ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಮತ್ತು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಕಟ್ಟಡ ಸಮಿತಿ ಸಹಯೋಗದಲ್ಲಿ ಕುಲಾಲ ಮಂದಿರದಲ್ಲಿ ಆಟಿಡೊಂಜಿ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ಪ್ರಗತಿಪರ ಕೃಷಿಕ ವಿಶ್ವನಾಥ ಮೂಲ್ಯ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಭಾರ ಅಧ್ಯಕ್ಷ ಯಾದವ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಹರೀಶ್ ಪೂಂಜ ಅವರನ್ನು ಗೌರವಿಸಲಾಯಿತು.
ಸಂಪನ್ಮೂಲ ವ್ಯಕ್ತಿ ಪ್ರಮೋದ್ ಕುಲಾಲ್, ಕುಲಾಲ ಕುಂಬಾರರ ಮಹಿಳಾ ವೇದಿಕೆ ಅಧ್ಯಕ್ಷೆ ಆಶಾಲತಾ ತಿಲಕ್‌ರಾಜ್, ಪ್ರಮುಖರಾದ ಸುಜಾತಾ ಪಿ.ಸಾಲ್ಯಾನ್, ದಿನೇಶ್ ಮೂಲ್ಯ, ಜಯಶ್ರೀ ನಾರಾಯಣ, ಅವಿನಾಶ್ ಕುಲಾಲ್ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಹರೀಶ್ ಸ್ವಾಗತಿಸಿದರು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕಿ ಕಾವ್ಯಶ್ರೀ ನಿರೂಪಿಸಿದರು. ಶಿಕ್ಷಕ ಜಗನ್ನಾಥ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net