ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ್ ಅಡಿಗ, ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಕೀರ್ತನಾ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಸುಹಾಸ್ ಜಟ್ಟಿಮನೆ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕಿ ಡಾ.ಸೋನಾ ಎಚ್.ಸಿ. ವಂದಿಸಿದರು.