

ಪಡುಬಿದ್ರಿ: ಕಾಪು ನಗರ ಸಹಿತವಾಗಿ ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾಗಬೇಕು. ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಕಾಪುವಿನಲ್ಲಿ ರೆಸಾರ್ಟ್, ಹೋಮ್ ಸ್ಟೇ, ಹೋಟೆಲ್ ಅಥವಾ ಕೈಗಾರಿಕೆಗಳಿಗೆ ಹೂಡಿಕೆ ಮಾಡುವುದಿದ್ದರೆ ಕಾಪು ಚಾರಿಟೆಬಲ್ ಟ್ರಸ್ಟ್ ಸಹಕಾರ ನೀಡುತ್ತದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಹೇಳಿದರು.
ಮಾತೃ ವೈಭವ ಸೇವಾ ಸಮಿತಿ